ನವದೆಹಲಿ, ಸೆ 18 (DaijiworldNews/PY): ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಸಚಿವರನ್ನು ತಾವು ಭೇಟಿಯಾಗಲಿದ್ದು, ರಾಜ್ಯದ ಅಭಿವೃದ್ದಿಯ ಬಗ್ಗೆ ಚರ್ಚೆ ನಡೆಸುವುದಾಗಿ ಸಿಎಂ ಬಿಎಸ್ವೈ ಅವರು ತಿಳಿಸಿದರು.
ನವದೆಹಲಿಯಲ್ಲಿ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಸೂಪರ್ ಸಿಎಂ ಅಲ್ಲ. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರದ ಚುಟುವಟಿಕೆಗಳಲ್ಲಿ ಯಾವುದೇ ರೀತಿಯಾದ ಹಸ್ತಕ್ಷೇಪ ಮಾಡಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಜಾತ್ಯಾತೀತ ಜನತಾ ದಳದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ವೈ ಅವರು, ಹೆಚ್ಡಿಕೆ ಅವರು ತಮ್ಮ ಕ್ಷೇತ್ರದ ಅಭಿವೃದ್ದಿ ಬಗ್ಗೆ ಮಾತುಕತೆ ನಡೆಸಲು ಭೇಟಿ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಉಹಾಪೋಹಗಳನ್ನು ಸೃಷ್ಠಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.