ನವದೆಹಲಿ,ಸೆ.18 (DaijiworldNews/HR): ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಸಂಸದರ ವೇತನ, ಭತ್ಯೆಯನ್ನು ಶೇ. 30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ.
ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ ಮತ್ತು ಪ್ರಹ್ಲಾದ್ ಜೋಷಿ, ಸಚಿವರ ವೇತನ, ಭತ್ಯೆ ತಿದ್ದುಪಡಿ ಹಾಗೂ ಸಂಸದರ ವೇತನ, ಭತ್ಯೆ, ಪಿಂಚಣಿ ಮಸೂದೆ 2020ನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.
ಮಸೂದೆಗೆ ಬೆಂಬಲ ಸೂಚಿಸಿದ ಕಾಂಗ್ರೆಸ್ ಹಾಗೂ ಮತ್ತಿತರ ಪಕ್ಷಗಳ ಸದಸ್ಯರು, ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಆದಷ್ಟು ಬೇಗ ಪುನರ್ ಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದರು.
ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ತಮ್ಮ ಕ್ಷೇತ್ರದಲ್ಲಿ ಜನರಿಗೆ ನೆರವಾಗಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಸಂಸದರು ಹೇಳಿದ್ದಾರೆ.