ಬೆಂಗಳೂರು, ಸೆ 18 (DaijiworldNews/PY): ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ನ್ಯಾಯಾಲಯ ಸೆ.19ರ ಶನಿವಾರಕ್ಕೆ ಮುಂದೂಡಿದೆ.
ಡ್ರಗ್ ಮಾಫಿಯಾ ದಂಧೆ ಪ್ರಕರಣದ ಹಿನ್ನೆಲೆ ನಟಿ ಸಂಜನಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನೆಲೆ ಸಂಜನಾ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸಂಜನಾ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ವಿಚಾರಣೆಯನ್ನು ಸೆ.19ರ ಶನಿವಾರಕ್ಕೆ ಮುಂದೂಡಲಾಗಿದೆ ಎಂದು ಸಿಸಿಬಿಗೆ ನೋಟಿಸ್ ನೀಡಿದೆ. ಉಳಿದ ಆರೋಪಿಗಳ ವಿಚಾರಣೆಯನ್ನು ನಾಳೆ ನಡೆಸಲಾಗುತ್ತದೆ ಎಂದು ಕೋರ್ಟ್ ತಿಳಿಸಿದೆ