ಲಖನೌ, ಸೆ 18 (DaijiworldNews/PY): ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳನ್ನು ಮುಂದಿನ ಮೂರು ತಿಂಗಳಿನಲ್ಲಿ ಪ್ರಾರಂಭಿಸಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರು ತಿಂಗಳ ಅವಧಿಯಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಕೊಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದರು.
ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಇದುವರೆಗೆ 3 ಲಕ್ಷ ನೇಮಕಾತಿಗಳನ್ನು ಮಾಡಲಾಗಿದೆ, ಇದೇ ರೀತಿ ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕ ರೀತಿಯಲ್ಲಿ ಪ್ರಾರಂಭಿಸಿ, ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಪತ್ರವನ್ನು ವಿತರಿಸಬೇಕು ಎಂದರು.
ಇಲ್ಲಿಯವರೆಗೆ ರಾಜ್ಯ ಪೊಲೀಸ್ ಇಲಾಖೆಗೆ ಸುಮಾರು 1.37 ಲಕ್ಷ, 50 ಸಾವಿರ ಶಿಕ್ಷಕರು ಹಾಗೂ ಇತರ ಇಲಾಖೆಗಳಲ್ಲಿ ಒಂದು ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಎಂದರು.