ನವದೆಹಲಿ, ಸೆ.19(DaijiworldNews/HR): ಇಂದು ಬೆಳ್ಳಂಬೆಳಗ್ಗೆ ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ ಹಲವು ದೇಶದ ವಿವಿಧೆಡೆ ದಾಳಿ ನಡೆಸಿ ಬಂಧಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಕೇರಳದ ಎರ್ನಾಕುಲಂನಲ್ಲಿ 11 ಕಡೆ ನಡೆಸಲಾದ ದಾಳಿಯಲ್ಲಿ ಉಗ್ರರನ್ನು ಬಂಧಿಸಲಾಗಿದೆ.
ಬಂಧಿತ ಉಗ್ರರ ಬಳಿ ಇದ್ದ ಡಿಜಿಟಲ್ ಉಪಕರಣ, ದಾಖಲೆಗಳು, ಜಿಹಾದಿ ಸಾಹಿತ್ಯ, ಹರಿತವಾದ ಆಯುಧಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ .
ಇನ್ನು ಪ್ರಾಥಮಿಕ ತನಿಖೆ ವೇಳೆ, ಈ ಉಗ್ರರನ್ನು ಪಾಕಿಸ್ಥಾನ ಮೂಲದ ಅಲ್ ಖೈದಾ ಉಗ್ರಗಾಮಿ ಸಂಘಟನೆ, ಸೋಷಿಯಲ್ ಮೀಡಿಯಾ ಮೂಲಕ ನೇಮಕಾತಿ ಮಾಡಿಕೊಂಡಿದೆ. ಇವರು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸುವುದಕ್ಕೆ ಪ್ರಚೋದಿತರಾಗಿದ್ದರು ಎಂದು ತಿಳಿದು ಬಂದಿದೆ.