ರಜೌರಿ, ಸೆ.19(DaijiworldNews/HR): ಜಮ್ಮು ಕಾಶ್ಮೀರದರ ರಜೌರಿಯಲ್ಲಿ ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಮೂವರು ಎಲ್ಇಟಿ ಉಗ್ರರನ್ನು ಬಂಧಿಸಲಾಗಿದೆ.
ಸಾಂಧರ್ಭಿಕ ಚಿತ್ರ
ಖಚಿತ ಮಾಹಿತಿ ಮೇರೆಗೆ ಜಮ್ಮುವಿನ ರಜೌರಿ ಜಿಲ್ಲೆಯಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸೇನಾಪಡೆ ಜಂಟಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಮೂವರು ಉಗ್ರರನ್ನು ಸೇನಾಪಡೆ ಬಂಧನಕ್ಕೊಳಪಡಿಸಿದ್ದು, ಉಗ್ರರ ಬಳಿಯಿದ್ದ 2 ಎಕೆ 56 ರೈಫಲ್ಸ್ ಗಳು, 2 ಪಿಸ್ತೂಲ್, 4 ಗ್ರೆನೇಡ್, ರೂ.1 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.