ಬೆಂಗಳೂರು, ಸೆ. 19 (DaijiworldNews/MB) : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಎರಡು ದಿನಗಳ ಕಾಲ ಮುಂಡೂದಿದೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಈ ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗೆ ಸಮಯ ಕೇಳಿದ್ದ ಕಾರಣದಿಂದಾಗಿ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ ಮುಂದೂಡಿದ್ದು ಇದರೊಂದಿಗೆ ಪ್ರಕರಣದ ಆರೋಪಿ ನಂ. 1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿಯ ವಿಚಾರಣೆಯನ್ನು ಕೂಡಾ ಮುಂದೂಡಿದೆ.
ಡ್ರಗ್ಸ್ ದಂಧೆಗೆ ಸಂಬಂಧಿಸಿ ಶನಿವಾರ ಐವರು ಆರೋಪಿಗಳ ಜಾಮೀನಿನ ಅರ್ಜಿ ವಿಚಾರಣೆ ನಡೆಯಬೇಕಾಗಿತ್ತು. ಈ ಪೈಕಿ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಈ ಐವರು ಆರೋಪಿಗಳ ಪೈಕಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ ಕೆಲವರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.