ಬೆಂಗಳೂರು, ಸೆ. 19 (DaijiworldNews/MB) : ಉಪಮುಖ್ಯಮಂತ್ರಿ ಅಶ್ವತ ನಾರಾಯಣರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.