ಬೆಳಗಾವಿ, ಸೆ 19 (DaijiworldNews/PY): ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ವದಂತಿ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗುವುದು ಎನ್ನುವ ವಿಚಾರ ಸುಳ್ಳು . ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮಂದುವರೆಯಲಿದ್ದಾರೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ತೀರ್ಮಾನವನ್ನು ಮುಖ್ಯಮಂತ್ರಿ ಅವರು ಅಥವಾ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ. ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೆ ಖುಷಿ ಎಂದರು.