ಕೋಲ್ಕತಾ,ಸೆ.19(DaijiworldNews/HR): ಅಕ್ರಮ ಬಾಂಬ್ ತಯಾರಕರ ಸ್ವರ್ಗವಾಗುತ್ತಿದೆ ಪಶ್ಚಿಮ ಬಂಗಾಳ ಎಂದು ರಾಜ್ಯಪಾಲ ಜಗದೀಪ್ ಧಂಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎನ್ಐಎ ಅಧಿಕಾರಿಗಳು ಬಂಗಾಳದ ಮುರ್ಷಿದಾಬಾದ್ ಮತ್ತು ಕೇರಳದ ಎರ್ನಾಕುಲಂನಲ್ಲಿ ಇಂದು ದಾಳಿ ನಡೆಸಿದ್ದ 9 ಅಲ್ ಖೈದಾ ಉಗ್ರರನ್ನು ಬಂಧಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯಪಾಲ ಜಗದೀಪ್ ಧಂಕರ್ ಅವರು ಬಂಗಾಳ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಬಂಗಾಳ ಅಕ್ರಮ ಬಾಂಬ್ ತಯಾರಕರ ನೆಲೆಯಾಗುತ್ತಿದ್ದು, ಇದು ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ. ಆದರೆ ಅಧಿಕಾರದಲ್ಲಿರುವ ಸರ್ಕಾರ ಮಾತ್ರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದು, ವಿಪಕ್ಷಗಳ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಈ ಘಟನೆ ಸರ್ಕಾರ ಮತ್ತು ಪೊಲೀಸರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಹೇಳಿದ್ದಾರೆ.