ಜೈಪುರ, ಸೆ.19(DaijiworldNews/HR): ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದು ಅಲ್ಲದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿ ಘಟನೆ ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯು ಅರಣ್ಯ ಪ್ರದೇಶದ ಮೂಲಕ ಮನೆಗೆ ಹಿಂತಿರುಗುತ್ತಿದ್ದಾಗ ಆರು ಮಂದಿ ಕಾಮುಕರು ಅಡ್ಡಗಟ್ಟಿದ್ದಾರೆ. ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಅದನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಸಂತ್ರಸ್ತ ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು ನಂತರ ಬಿವಾಡಿಯ ತಿಜಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯ ಮೇಲಿನ ಅತ್ಯಾಚಾರ ವಿಡಿಯೋವನ್ನು ಆರೋಪಿಗಳು ಜಾಲತಾಣದಲ್ಲಿ ಹರಿಬಿಟ್ಟಿದ್ದು ಇದನ್ನು ಆಧರಿಸಿ ಸದ್ಯ ಮೂವರನ್ನು ಬಂಧಿಸಲಾಗಿದ್ದು ಇನ್ನು ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ.