ಬೆಂಗಳೂರು, ಸೆ.19(DaijiworldNews/HR): ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಯಾಗಿದ್ದ ಹಿನ್ನಲೆಯಲ್ಲಿ, ಇಂದು ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಆರ್ ವಿ ಯುವರಾಜ್ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಮೂವರನ್ನು ಸತತ 7 ಗಂಟೆಗಳ ಕಾಲ ಸಿಸಿಬಿಯ ಅಧಿಕಾರಿಗಳು ವಿಚಾರಣೆ ನಡೆಸಲಾಗಿದ್ದು, ಬಳಿಕ ಮೂವರು ಸಿಸಿಬಿ ಕಚೇರಿಯಿಂದ ಹೊರ ಬಂದಿದ್ದಾರೆ.
ಇನ್ನು ಸಿಸಿಬಿಯಿಂದ ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಆರ್ ವಿ ಯುವರಾಜ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ, ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದಂತ ಮೂವರನ್ನು ಸತತ 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು.