ನವದೆಹಲಿ, ಸೆ.20 (DaijiworldNews/HR): ಭಾರೀ ವಿರೋಧಗಳ ನಡುವೆಯೂ ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಭಾನುವಾರ ಮಂಡನೆ ಮಾಡಿದ್ದಾರೆ.
ಸಾಂಧರ್ಭಿಕ ಚಿತ್ರ
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ, 2020 ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020. ಮಸೂದೆಯನ್ನು ಕೇಂದ್ರ ಸಚಿವರು ಮಂಡನೆ ಮಾಡಿದ್ದಾರೆ.
ಈ ಬಗ್ಗೆ ಮಸೂದೆ ಮಂಡನೆ ವೇಳೆ ಮಾತನಾಡಿರುವ ತೋಮರ್ ಅವರು, ಎರಡು ಮಸೂದೆಗಳು ಐತಿಹಾಸಿಕವಾಗಿದ್ದು ರೈತರ ಜೀವನದಲ್ಲಿ ಬದಲಾವಣೆ ತರಲಿದೆ. ರೈತರು ದೇಶದಲ್ಲಿ ಎಲ್ಲಿ ಬೇಕಾದರೂ ತಮ್ಮ ಉತ್ಪನ್ನಗಳನ್ನು ಮುಕ್ತವಾಗಿ ವ್ಯಾಪಾರ ಮಾಡಲು ಈ ಮಸೂದೆ ಅನುವು ಮಾಡಿಕೊಡಲಿದೆ. ಜೊತೆಗೆ ಈ ಮಸೂದೆಗಳು ಕನಿಷ್ಠ ಬೆಂಬಲ ಬೆಲೆಗೆ ಸಂಬಂಧಿಸಿಲ್ಲ ಎಂಬುದನ್ನು ಇದೇವೇಳೆ ಸ್ಪಷ್ಟಪಡಿಸಲು ಇಚ್ಛಿಸುತ್ತನೆಂದು ಎಂಬುದಾಗಿ ಹೇಳಿದ್ದಾರೆ.
ಇನ್ನು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ, ಯಾವುದೇ ಕೃಷಿ ಉತ್ಪನ್ನಗಳ ಉತ್ಪಾದನೆ ಅಥವಾ ಪಾಲನೆಗೂ ಮೊದಲು ಕೃಷಿ ಒಪ್ಪಂದವನ್ನು ಅನುವು ಮಾಡಿಕೊಡಲಿದೆ. ಕೃಷಿ ಉತ್ಪನ್ನಗಳ ಖರೀದಿಗೆ ಪಾವತಿಸಬೇಕಾದ ಖಾತರಿಯ ಬೆಲೆಯನ್ನು ಅಂತಹ ಒಪ್ಪಂದಗಳಲ್ಲಿ ಉಲ್ಲೇಖಿಸಲಾಗುತ್ತದೆ ಎಂದು ಮಸೂದೆ ಕುರಿತು ಸಚಿವರು ವಿವರಿಸಿದ್ದಾರೆ.