ನವದೆಹಲಿ, ಸೆ.20 (DaijiworldNews/HR): ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೇ ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ.
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು, ಪ್ರತಿಭಟನೆಯ ನಡುವೆಯೇ ಧ್ವನಿ ಮತದ ಮೂಲಕ ಮಸೂದೆ ಅಂಗೀಕಾರಗೊಂಡಿದ್ದು, ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.