ಬೆಂಗಳೂರು, ಸೆ.21 (DaijiworldNews/HR): ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಅನೇಕ ಶಾಸಕರುಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಅವರಿಗೆ ಸದನಕ್ಕೆ ಬರಲು ಸಾಧ್ಯವಾಗುತ್ತಿಲ್ಲ, ಆದಕಾರಣ ಅಧಿವೇಶನವನ್ನು ಆದಷ್ಟು ಬೇಗ ಮುಗಿಸುವ ಬಗ್ಗೆ ವಿಪಕ್ಷಗಳ ಸಹಕಾರ ಕೋರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 50 ರಿಂದ 60 ಶಾಸಕರಿಗೆ ಕೊರೊನಾ ವೈರಸ್ ಸೋಂಕಿಗೀಡಾಗಿರುವುದರಿಂದ ಅವರು ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಗತ್ಯವಿರುವ ವಿಷಯಗಳನ್ನು ಮಾತ್ರ ಚರ್ಚೆಮಾಡಿ ಅಧಿವೇಶನ ಬೇಗ ಮುಗಿಸುವ ಬಗ್ಗೆ ವಿಪಕ್ಷಗಳ ಸಹಕಾರ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ಬಳಿಕ ಸಚಿವ ಸಂಪುಟ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.