ಬೆಳಗಾವಿ, ಸೆ. 21 (DaijiworldNews/MB) : ನಾನು ಹಲವು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಬಿ ಎಸ್ ಯಡಿಯೂರಪ್ಪನವು ಮಾತ್ರ ಸರ್ವಾಧಿಕಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರಲ್ಲಿ ದ್ವೇಷ ಅಸೂಯೆಯಿದೆ ಎಂದು ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವು ಪಕ್ಷಾಂತರದ ಪ್ರಭು, ಭ್ರಷ್ಟಾಚಾರ, ಲೂಟಿ ಮಾಡುತ್ತಿದ್ದಾರೆ. ರಾಜ್ಯದ ಯಾವ ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಕೂಡಾ ಬಿಎಸ್ವೈ ಅವರನ್ನು ಪ್ರಶ್ನಿಸದಂತೆ ನೋಡಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಅವರು ನಾನು ಹಣವಿದ್ದವರನ್ನು ಚುನಾವಣೆಗೆ ನಿಲ್ಲಿಸುವ ಮೂಲಕ ನಾನು ಶಾಸನಸಭೆಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರವಾಸದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ರಾಜ್ಯ ಸರ್ಕಾರವು ಸ್ಪಂದನೆ ನೀಡಬೇಕು ಎಂದು ಹೇಳಿರುವ ಅವರು, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಇಲ್ಲದಿದ್ದರೆ ಬಿಜೆಪಿ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಬೆಳಗಾವಿ ಸುವರ್ಣ ಸೌಧದಲ್ಲಿ ಕೂಡಲೇ ಅಧಿವೇಶನ ನಡೆಸಬೇಕು. ಅಧಿವೇಶನ 15 ದಿನ ನಡೆಸಬೇಕು ಎಂದು ಆಗ್ರಹಿಸಿದರು.