ಮುಂಬೈ, ಸೆ. 22 (DaijiworldNews/HR) : ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಸತತ 24 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ 3.30ರ ಸಮಯದಲ್ಲಿ ಮೂರು ಮಹಡಿ ಕಟ್ಟಡ ಕುಸಿದಿದ್ದು, ಈ ವೇಳೆ ಸುಮಾರು 20ರಿಂದ 25 ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ಧೌಡಾಯಿಸಿ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ಮಾಡುತ್ತಿದ್ದು, ಈ ವರೆಗೂ 18 ದೇಹಗಳನ್ನು ಸಿಬ್ಬಂದಿ ಹೊರಗೆ ತೆಗೆದಿದ್ದು, 5 ಮಂದಿಯನ್ನು ರಕ್ಷಿಸಿದ್ದಾರೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರರು ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಈ ವರೆಗೂ 18 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಅಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ 5 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಸಿಲುಕಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.