ನವದೆಹಲಿ, ಸೆ. 22(DaijiworldNews/HR): ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಹೇಳಿದ್ದು, ಜೊತೆಗೆ 2 ಕೋಟಿ ರೈತರ ಸಹಿ ಸಂಗ್ರಹ ಅಭಿಯಾನ ಕೈಗೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ ಪಕ್ಷದ ಹಿರಿಯ ಮುಖಂಡರ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಈ ಕೃಷಿ ಮಸೂದೆಗಳು ಬಡ ಜನರಿಗೆ ವಿರುದ್ಧವಾಗಿದ್ದು, ರೈತರಿಂದ 2 ಕೋಟಿ ಸಹಿ ಸಂಗ್ರಹ ಗುರಿಯ ಹಿನ್ನೆಲೆಯಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಆ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂಬುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ.