ಬೆಂಗಳೂರು, ಸೆ 22(Daijiworld News/PY): ಡ್ರಗ್ ಮಾಫಿಯಾವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾನೂನು ಬಲಪಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕಾಯ್ದೆಗಳ ರಚನೆಗೆ ರಾಷ್ಟ್ರೀಯ ಕಾನೂನಿನ ಮೊರೆ ಹೋಗಿದೆ.
ಡ್ರಗ್ಸ್ ದಂಧೆಯಲ್ಲಿ ಪಾಲ್ಗೊಂಡಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನಿನ ಅಸ್ತ್ರ ಉಪಯೋಗಿಸಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆ ಸರ್ಕಾರ ರಾಷ್ಟ್ರೀಯ ಕಾನೂನು ಶಾಲೆಯೊಂದಿಗೆ ಚರ್ಚೆ ನಡೆಸಿದೆ.
ಈ ಬಗ್ಗೆ ಮಾತನಾಡಿರುವ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಕಾಯ್ದೆಗಳಿಗೆ ಸಂಬಂಧಿಸಿದ ಕರಡು ಸಲ್ಲಿಕೆಯಾದ ಕೂಡಲೇ ಸರ್ಕಾರ ಅದನ್ನು ಪರಿಶೀಲನೆ ನಡೆಸಿ ಬಳಿಕ ಡ್ರಗ್ಸ್ ಪೆಡ್ಲರ್ಗಳನ್ನು ಕಾನೂನಿನ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.