ಬೆಂಗಳೂರು, ಸೆ 22(Daijiworld News/PY): ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡುವ ಕೇಂದ್ರದ ಆದೇಶದ ವಿರುದ್ದ ರಾಜ್ಯ ಸರ್ಕಾರದ ತೀರ್ಪಿನ ಹೊರತಾಗಿಯೂ ಸೆ.21ರ ಸೋಮವಾರ ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ನೀಡಿವೆ.
ಸಾಂದರ್ಭಿಕ ಚಿತ್ರ
ಈ ವೇಳೆ ಕೆಲವು ಶಾಲೆಗಳಲ್ಲಿ ಶಿಕ್ಷಕರನ್ನು ಭೇಟಿ ಮಾಡಲು ವಿದ್ಯಾರ್ಥಿಗಳು ಭೇಟಿ ನೀಡಿದ್ದ ಸಂದರ್ಭ ಶೈಕ್ಷಣಿಕ ವಿಚಾರದ ಬಗ್ಗೆ ಚರ್ಚಿಸಲು ಶಾಲಾ ಆವರಣದಲ್ಲಿ ಜಮಾಯಿಸಿದ್ದರು. ಈ ಸಂದರ್ಭ ಹಲವಾರು ವಿದ್ಯಾರ್ಥಿಗಳು, ಸೆಪ್ಟೆಂಬರ್ ಅಂತ್ಯದವರೆಗೆ ತರಗತಿಗಳನ್ನು ನಿರ್ಬಂಧಿಸುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ತಮಗೆ ತಿಳಿದಿಲ್ಲ ಎಂದಿದ್ದಾರೆ.
ಕೊರೊನಾವನ್ನು ನಿಯಂತ್ರಿಸುವ ಸಲುವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಕೆಲವು ಶಾಲೆಗಳು ವಿಫಲವಾಗಿವೆ ಎನ್ನಲಾಗಿದೆ.
ರಾಜ್ಯ ಸರ್ಕಾರವು ಕೊನೆಯ ವೇಳೆಗೆ ತನ್ನ ಆದೇಶವನ್ನು ಘೋಷಿಸುತ್ತದೆ. ನಾವು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಲು ಸಿದ್ದರಾಗಿದ್ದೇವೆ.ಕೆಲವು ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದು, ಅವರೊಂದಿಗೆ ನಾವು ಚರ್ಚೆ ನಡೆಸಿದ್ದೇವೆ ಎಂದು ಬೆಂಗಳೂರಿನ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು ತಿಳಿಸಿದ್ದಾರೆ.
ಸೆಪ್ಟೆಂಬರ್ ಅಂತ್ಯದವರೆಗೆ ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಶಾಲೆಗಳಿಗೆ ಭೇಟಿ ನೀಡುವಂತೆ ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಶಾಲಾ ನಿರ್ವಹಣಾ ಸಂಘವು ತೀವ್ರವಾಗಿ ಟೀಕಿಸಿದೆ.
ಸರ್ಕಾರವು ತನ್ನ ವಿದ್ಯಾಗಮನ ಕಾರ್ಯಕ್ರಮವನ್ನು ಮುಂದುವರೆಸಿದೆ ಆದಲ್ಲಿ, ಇದರಿಂದ ಖಾಸಗಿ ಶಾಲೆಗಳಿಗೆ ಶಿಕ್ಷಕರನ್ನು ಸಂಪರ್ಕಿಸಲು ಕಷ್ಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಹಯೋಗ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಿ ಶಶಿ ಕುಮಾರ್ ಹೇಳಿದ್ದಾರೆ.
ನಾವು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಿದ್ದರಾಗಿದ್ದೇವೆ. ಅಲ್ಲದೇ, ಶಾಲಾ ನೈರ್ಮಲ್ಯೀಕರಣಕ್ಕಾಗಿ ಸಾವಿರಾರು ರೂ ಖರ್ಚು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.