ಬೆಂಗಳೂರು, ಸೆ. 22(DaijiworldNews/HR): ಕರ್ನಾಟಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಮಾರ್ಚ್ನಿಂದ ಬಾಕಿ ಇರುವ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಸಂಬಳವೂ ಇಲ್ಲದೆ ಬದುಕು ಕಷ್ಟಕರವಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಿ ಎಂದು ಬಿಜೆಪಿ ಎಂಎಲ್ಸಿ ಆಯನೂರು ಮಂಜುನಾಥ್, ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಮಂಗಳವಾರ ಸದನದಲ್ಲಿ ಪ್ರಶ್ನೋತ್ತರ ಕಲಾಪ ವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ಅತಿಥಿ ಉಪನ್ಯಾಸಕರಿಗೆ 5 ತಿಂಗಳಿಂದ ಸಂಬಳವಿಲ್ಲದೆ ಕಷ್ಟ-ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ವೇತನ ಪಾವತಿಸಿ. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಲು ಕಾಲಾವಕಾಶ ಬೇಕು ಎಂದು ಸಭಾನಾಯಕ ಕೋಟ ಶೀನಿವಾಸ ಪೂಜಾರಿ ಹೇಳುತ್ತಿದ್ದಂತೆ ಕೋಪಗೊಂಡ ಆಯನೂರು, ಏಕಾಂಗಿಯಾಗಿ ಸಭಾಪತಿ ಪೀಠದ ಮುಂದೆ ಪ್ರತಿಭಟನೆಗೆ ಕುಳಿತ್ತಿರು. ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕೂಡ ಬೆಂಬಲಿಸಿದ್ದವು.
ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಉಪನ್ಯಾಸಕರಿಗೆ ಶೀಘ್ರದಲ್ಲಿಯೇ ಬಾಕಿ ವೇತನ ನೀಡಲಿದ್ದು, . ಈ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.