ಬೆಂಗಳೂರು, ಸೆ 23(DaijiworldNews/PY): ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ದೃಢಪಟ್ಟಿದ್ದು, ಎರಡು ದಿನ ವಿಧಾನಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ ಡಿಸಿಎಂ ಅವರಿಗೆ ಕೊರೊನಾ ದೃಢಪಟ್ಟಿರುವ ವಿಚಾರ ಆತಂಕಕ್ಕೆ ಕಾರಣವಾಗಿದೆ.
ಎರಡು ದಿನ ವಿಧಾನಸಭೆಯಲ್ಲಿ ಪಾಲ್ಗೊಂಡಿರುವ ಅವರು ಹಲವು ಸಚಿವರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಕೊರೊನಾ ದೃಢಪಟ್ಟಿರುವ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ನಲ್ಲಿರುವಂತೆ ಎಂದು ಕೋರುತ್ತೇನೆ ಎಂದಿದ್ದಾರೆ.
ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ತಮ್ಮೆಲ್ಲರ ಹಾರೈಕೆಯಿಂದ ಕೊರೊನಾ ವೈರಾಣುವಿನಿಂದ ಶೀಘ್ರವಾಗಿ ಗುಣಮುಖವಾಗಿ ಎಂದಿನಂತೆ ಕಾರ್ಯಪ್ರೌವೃತ್ತನಾಗುತ್ತೇನೆ ಎಂದು ತಿಳಿಸಿದ್ದಾರೆ.