ನವದೆಹಲಿ, ಸೆ 23(DaijiworldNews/PY): ಸೆಪ್ಟೆಂಬರ್ 26ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.
ಸಭೆಯಲ್ಲಿ ಉಭಯ ನಾಯಕರು ರಾಷ್ಟ್ರಗಳ ನಡುವಿನ ಸಂಬಂಧದ ಅಭಿವೃದ್ದಿಯ ಬಗ್ಗೆ ಮಾತನಾಡಲಿದ್ದು, ಭಯೋತ್ಪದನೆ ನಿವಾರಣೆ ಸೇರಿದಂತೆ ರಕ್ಷಣೆ, ವ್ಯಾಪಾರ ಸಂಬಂಧಗಳ ಬಗ್ಗೆ ಹಾಗೂ ಶ್ರೀಲಂಕಾದಲ್ಲಿ ಭಾರತೀಯ ಅಭಿವೃದ್ದಿ ಯೋಜನೆಗಳ ಅನುಷ್ಠಾನದಂತಹ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಸಂದರ್ಭ ತಮಿಳು ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸುವ ಬಗ್ಗೆ ಭಾರತ ಮಾತುಕತೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.