ಬೆಂಗಳೂರು, ಸೆ. 23 (DaijiworldNews/SM): ವಿಧಾನ ಸಭೆಯಲ್ಲಿ ರೈತರು ಹಾಗೂ ಪ್ರತಿ ಪಕ್ಷದವರ ತೀವ್ರ ವಿರೋಧದ ನಡುವೆ ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಇದಕ್ಕೆ ರೈತ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 28ರ ಸೋಮವಾರದಂದು ಬಂದ್ ನಡೆಸಲು ಕರೆ ನೀಡಲಾಗಿದೆ. ಈ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ತೀವ್ರ ವಿರೋಧದ ನಡುವೆಯೂ ವಿಧೇಯಕ ಮಂಡನೆಯಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದ ನಿರ್ಧಾರವನ್ನು ವಿರೋಧಿಸಿ ಸೆಪ್ಟೆಂಬರ್ 28ರಂದು ರಾಜ್ಯಾದ್ಯಂತ ಬಂದ್ ನಡೆಸುವುದಾಗಿ ರೈತ ಸಂಘಟನೆಗಳು ತೀರ್ಮಾನಿಸಿವೆ. ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಸರಕಾರದ ವಿಧೇಯಕದಿಂದ ರೈತರಿ ಯಾವುದೇ ಲಾಭವಿಲ್ಲ. ರೈತರಿಗೆ ವಿಧೇಯಕದಿಂದ ಅನುಕೂಲವಿದೆ ಎನ್ನುವುದು ಸುಳ್ಳು ಎಂದು ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.