ಮುಂಬೈ, ಸೆ. 24(DaijiworldNews/HR): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್, ಸಾರಾ ಅಲಿ ಖಾನ್ ಗೆ ಎನ್ಸಿಬಿ ಸಮನ್ಸ್ ನೀಡಿದೆ.
ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ರಿಯಾ ಚಕ್ರವರ್ತಿ ಹೇಳಿಕೆಯನ್ನಾಧರಿಸಿ ನಟಿಯರಿಗೆ ಎನ್ಸಿಬಿ ಸಮನ್ಸ್ ನೀಡಲಾಗಿದೆ.
ವಿಚಾರಣೆ ಸಂಬಂಧಿಸಿದಂತೆ ಸೆಪ್ಟೆಂಬರ್ 24ಕ್ಕೆ ಫ್ಯಾಶನ್ ಡಿಸೈನರ್ ಸಿಮೋನ್ ಖಂಬಟ್ಟಾ, ನಟಿ ರಕುಲ್ ಪ್ರೀತ್ ಸಿಂಗ್, ಸೆ. 25ರಂದು ದೀಪಿಕಾ ಪಡುಕೋಣೆ, ಹಾಗೂ ಸೆ. 26ಕ್ಕೆ ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಇನ್ನು ಡ್ರಗ್ಸ್ ಖರೀದಿಗಾಗಿ ದೀಪಿಕಾ ಪಡುಕೋಣೆ ಮತ್ತು ಶ್ರದ್ಧಾ ಕಪೂರ್ ವಾಟ್ಸಪ್ ಚಾಟ್ ಮಾಹಿತಿ ಭಾರಿ ಚರ್ಚೆಗೆ ಭಾಸವಾಗಿದೆ.