ಸೂರತ್, ಸೆ 24(DaijiworldNews/PY): ಸೂರತ್ನ ತೈಲ ಹಾಗೂ ನೈಸರ್ಗಿಕ ಅನಿಲ ನಿಗಮ ಸಂಸ್ಕರಣಾ ಘಟಕದಲ್ಲಿ ಗುರುವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ ಅಗ್ನಿಶಾಮಕ ಟೆಂಡರ್ಗಳು ಸ್ಥಳದಲ್ಲಿವೆ.
ಮುಂಜಾನೆ 3 ಗಂಟೆಯ ಸುಮಾರಿಗೆ ಒಎನ್ಜಿಸಿ ಹಜೀರಾ ಸ್ಥಾವರದಲ್ಲಿ ಸತತ ಮೂರು ಸ್ಪೋಟಗಳು ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿದ್ದು, ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರ ಡಾ. ಸೂರತ್ಗಾಗಿ ತಿಳಿಸಿದ್ದಾರೆ.
ಒಎನ್ಜಿಸಿ ಅಧಿಕಾರಿಗಳು ಸ್ಥಾವರದಲ್ಲಿನ ಅನಿಲದ ಒತ್ತಡದವನ್ನು ನಿಯಂತ್ರಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಗುರುವಾರ ಮುಂಜಾನೆ ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಿಯಂತ್ರಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿಸಿದೆ.