ಬೆಂಗಳೂರು, ಸೆ. 24(DaijiworldNews/HR): ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯ ಬಗ್ಗೆ ಸುದ್ದಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುವ ಯೋಚನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ಸಂವಾದದಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗಾಗಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆಯಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಇನ್ನು ಮೋದಿ ಲಾಕ್ ಡೌನ್ ಕಡ್ಡಾಯ ಎಂದು ಹೇಳಲಿಲ್ಲ. ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸರ್ಕಾರಗಳು ಅರಿವು ಮೂಡಿಸಬೇಕು. ಜನರು ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸುವುದನ್ನು ಬಿಡಬಾರದು ಎಂದು ಮನವಿ ಮಾಡಿದ್ದಾರೆ ಎಂಬುದಾಗಿ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.