ಶ್ರೀನಗರ, ಸೆ 24(DaijiworldNews/PY): ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಛದೂರ ಎಂಬಲ್ಲಿ ಉಗ್ರರು ದಾಳಿ ನಡೆಸಿದ ಪರಿಣಾಮ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಿಆರ್ಪಿಎಫ್ ಪಡೆಯ ಸಿಬ್ಬಂದಿಗಳು ಛದೂರ ಎಂಬ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಉಗ್ರರು ಸಿಆರ್ಪಿಎಫ್ ಪಡೆಯ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಅಲ್ಲದೇ, ಆ ಪ್ರದೇಶದಿಂದ ಪರಾರಿಯಾಗಿದ್ದಾರೆ.
ಉಗ್ರರ ದಾಳಿಯಿಂದ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೈನಿಕ ಹುತಾತ್ಮರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ದಾಳಿ ನಡೆಸಿ ಪರಾರಿಯಾದ ಉಗ್ರರಿಗಾಗಿ ಶೋಧ ಕಾರ್ಯ ಆರಂಭವಾಗಿದೆ ಎಂದು ವರದಿ ತಿಳಿಸಿದೆ.