ಜಮ್ಮು- ಕಾಶ್ಮೀರ, ಸೆ. 24(DaijiworldNews/HR): ಭಾರತೀಯ ಸೇನಾಪಡೆಯು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ ಘಟನೆ ಇಂದು ಜಮ್ಮು- ಕಾಶ್ಮೀರದ ಅವಂತಿಪೋರಾದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದ್ದವು.
ಕಾರ್ಯಚರಣೆಯ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ, ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
ಪ್ರಸ್ತುತ ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.