ಬೆಂಗಳೂರು, ಸೆ. 24(DaijiworldNews/HR): ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಬಳಿ ಕಾರ್ಮಿಕರು, ಶ್ರಮಜೀವಿಗಳ ಹಕ್ಕುಗಳ ರಕ್ಷಣೆಗಾಗಿ ಸಿಐಟಿಯು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ನೂರಾರು ಕಾರ್ಮಿಕರು, ಸಿಐಟಿಯು ಸದಸ್ಯರು ಸೇರಿದ್ದಾರೆ.
ಕೊರೊನಾ ಪರಿಹಾರ, ಪಡಿತರ ಕಿಟ್ ವಿತರಿಸಬೇಕು, ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ ಮಾಡಬೇಕು, ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಬಿಡಬೇಕು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.
ಇನ್ನು ಕಾರ್ಮಿಕ ಸಚಿವರು ಸ್ಥಳಕ್ಕೆ ಬಂದು ಭರವಸೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.