ಬೆಂಗಳೂರು, ಸೆ 24(DaijiworldNews/PY): ಕೆ.ಜೆ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಸೆ.24ರ ಗುರುವಾರ ನಗರದ 12 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ.
ಅಧಿಕಾರಿಗಳು ಮಂಗಳವಾರ ಹಾಗೂ ಬುಧವಾರ ಠಾಣೆಗೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಗುರುವಾರದಂದು ಎನ್ಐಎ ಅಧಿಕಾರಿಗಳು 12 ಕಡೆಗಳಲ್ಲಿ ದಾಳಿ ನಡೆಸಿದ್ದು, ಮತ್ತಷ್ಟು ಮಾಹಿತಿ ಸಂಗ್ರಹಿಸಿದ್ದಾರೆ.
ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಘಟನಾ ಸ್ಥಳ ಸೇರಿದಂತೆ ಆರೋಪಿಗಳ ಮನೆಯನ್ನು ಶೋಧ ಮಾಡಿದ್ದಾರೆ. ಬಳಿಕ ಅಧಿಕಾರಿಗಳು ಠಾಣೆಗೆ ಧಾವಿಸಿದ್ದು, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.