ಬೆಂಗಳೂರು, ಸೆ 25(DaijiworldNews/PY): ಸ್ಯಾಂಡಲ್ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ ಐವರು ಆರೋಪಿಗಳನ್ನು ವಿಚಾರಣೆ ನಡೆಸಲು ಎನ್ಡಿಪಿಎಸ್ ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.
ನಾಳೆಯಿಂದ ಜೈಲಿನಿಂದಲೇ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿರುವುದಾಗಿ ತಿಳಿದುಬಂದಿದೆ.
ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ವಿಚಾರ ಕೇಳಿ ಬಂದ ಹಿನ್ನೆಲೆ ಇಡಿ ಪ್ರಕರಣ ದಾಖಲಿಸಿಕೊಂಡಿತ್ತು. ಅಲ್ಲದೇ, ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಟಿಯರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಐದು ದಿನಗಳವರೆಗೆ ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಗೆ ನೀಡಿದ್ದು, ಸಂಜನಾ ಗಲ್ರಾನಿ, ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ ಹಾಗೂ ರಾಹುಲ್ ಅವರನ್ನು ಇಡಿ ವಿಚಾರಣೆ ನಡೆಸಲಿದೆ.