ನವದೆಹಲಿ, ಸೆ. 25(DaijiworldNews/HR): ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.
ಮನೀಶ್ ಅವರ ರಕ್ತದ ಪ್ಲೇಟ್ಲೆಟ್ಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಲ್ಲಿದ್ದ ಅವರನ್ನ ಈಗ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಕೊರೊನಾ ಸೋಂಕು ಮತ್ತು ಡೆಂಗ್ಯೂ ಜ್ವರ ಎರಡೂ ಒಟ್ಟಿಗೆ ಇರುವ ಪ್ರಕರಣಗಳು ಅಪರೂಪ ಎನ್ನಲಾಗಿದೆ.
ಮನೀಶ್ ಸಿಸೋಡಿಯಾ ಅವರಿಗೆ ಸೆಪ್ಟೆಂಬರ್ 14ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಐಸೋಲೇಶನ್ನಲ್ಲಿದ್ದ ಅವರು ಜ್ವರ ಹಾಗೂ ಉಸಿರಾಟದ ತೊಂದರೆ ಹೆಚ್ಚಾಗಿ ಸೆಪ್ಟೆಂಬರ್ 23ರಂದು ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ರಕ್ತದ ಪ್ಲೇಟ್ ಲೆಟ್ಗಳ ಸಂಖ್ಯೆ ಮತ್ತು ಆಕ್ಸಿಜನ್ ಮಟ್ಟ ಇಳಿಮುಖವಾಗುತ್ತಿರುವುದು ಕಂಡುಬಂದ ಹಿನ್ನಲೆಯಲ್ಲಿ ದೆಹಲಿಯ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.