ಶ್ರೀನಗರ, ಸೆ 25(DaijiworldNews/PY): ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಸದೆಪಡೆದಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಅನಂತ್ನಾಗ್ ಜಿಲ್ಲೆಯ ಸಿರ್ಹಾನಾ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದ ನಿಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಸದ್ಯ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿರುವುದಾಗಿ ವರದಿ ತಿಳಿಸಿದೆ.
ದಕ್ಷಿಣ ಕಾಶ್ಮೀರದಲ್ಲಿ ಕೂಡಾ ಇಂದು ಮುಂಜಾನೆ ಉಗ್ರರು ಸಿಆರ್ಪಿಎಫ್ ಪಡೆ ಮೇಲೆ ದಾಳಿ ನಡೆಸಿ ಬಳಿ ಪರಾರಿಯಾಗಿದ್ದಾರೆ. ದಾಳಿಯ ಸಂದರ್ಭ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.