ಬೆಂಗಳೂರು,ಸೆ. 25(DaijiworldNews/HR): ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಮುಂದಾಗಿದ್ದು, ಈ ವಿಚಾರ ಚರ್ಚೆಗೆ ಬರಬಹುದೇನೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್ಗೆ ಅವಕಾಶ ಕೇಳಿದ್ದೇವಾದರೂ ಇಂದಿನ ಸದನದ ಕಾರ್ಯಸೂಚಿಯಲ್ಲಿ ಆ ಬಗ್ಗೆ ನಮೂದಾಗಿಲ್ಲ. ಯಾವಾಗ ಚರ್ಚಯೆಂದು ಹೇಳಿಲ್ಲ. ಸ್ಪೀಕರ್ ಯಾವಾಗ ಕರೆದರೂ ಚರ್ಚೆ ಮಾಡಲು ಸಿದ್ಧ. ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಕಂಡು ಜವಾಬ್ದಾರಿ ವಿರೋಧ ಪಕ್ಷವಾಗಿದ್ದು ಸುಮ್ಮನೆ ಇದ್ದರೆ ಜನ ಏನನ್ನುತ್ತಾರೆ ಎಂದು ಹೇಳಿದ್ದಾರೆ.
ಇನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪ ಮಗ, ಮೊಮ್ಮಗ, ಅಳಿಯ ಎಲ್ಲರು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಈ ಹಿನ್ನಲೆಯಲ್ಲಿ ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ರೈತರಿಗೆ ಮಾರಕವಾಗುವ ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿದೆ. ಅದೇ ರೀತಿ ಕಾರ್ಮಿಕ ವಿರೋಧಿ ಕಾನೂನು ತಂದಿದೆ. ಯಡಿಯೂರಪ್ಪ ಒಂದು ವರ್ಷ ನಾಲ್ಕು ತಿಂಗಳಲ್ಲಿ ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ನಾವು ತೀರ್ಮಾನ ಮಾಡಿದ್ದು, . ಈಗಾಗಲೇ ಸ್ಪೀಕರ್ ಗೆ ನೋಟಿಸ್ ಕೂಡ ಕೊಡಲಾಗಿದೆ ಎಂದು ಹೇಳಿದರು.