ಬೆಂಗಳೂರು, ಸೆ.26 (DaijiworldNews/HR): ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸೋಮವಾರ ಆದೇಶ ಪ್ರಕಟಿಸಲಿದೆ.
ಇನ್ನು ಸೋಮವಾರದಂದು ನಟಿಯರಿಗೆ ಜಾಮೀನು ಸಿಗಲಿದೆಯಾ ಅಥವಾ ಸೆರೆವಾಸ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ. ಪ್ರಕರಣದ ಸಂಬಂಧ ವಾದ-ಪ್ರತಿವಾದ ಆಲಿಸಿರುವ ಎನ್ಡಿಪಿಎಸ್ ನ್ಯಾಯಾಲಯ ಇಬ್ಬರ ಜಾಮೀನು ಅರ್ಜಿ ಕುರಿತಾಗಿ ಸೋಮವಾರ ಆದೇಶ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.
ನಟಿಯರ ವಿರುದ್ಧ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿಕೊಂಡಿದೆ. ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯ ಕೂಡ ಅವರ ವಿಚಾರಣೆ ಆರಂಭಿಸಿದೆ. ಅವರ ವಿಚಾರಣೆಗೆ ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿ ಪುರಸ್ಕೃತವಾದ ಹಿನ್ನಲೆ ಇಂದಿನಿಂದ ಸಿಸಿಬಿ ಜೊತೆ ಇಡಿ ತನಿಖೆ ಕೂಡ ನಡೆದಿದೆ. ಪರಪ್ಪನ ಅಗ್ರಹಾರದಲ್ಲಿಯೇ ಅವರ ವಿಚಾರಣೆಯನ್ನು ಸಿಸಿಬಿ ನಡೆಸುತ್ತಿದೆ.