ಬೆಂಗಳೂರು,ಸೆ.26 (DaijiworldNews/HR): ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
ಈ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಗ್ರಾಮಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ತಿದ್ದುಪಡಿಯ ಅಗತ್ಯದ ಬಗ್ಗೆ ಪ್ರಸ್ತಾಪಿಸಿದರು.
ವಿಧಾನಸಭೆಯಲ್ಲಿ ಗ್ರಾಮಪಂಚಾಯಿತಿ,ತಾಲೂಕು,ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10 ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ.
ಇನ್ನು ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿದ್ದು ಅದಕ್ಕೆ ಸದನದ ಒಪ್ಪಿಗೆ ಪಡೆದು ಕಾನೂನು ರೂಪ ನೀಡಲು ಅನುಮತಿ ಪಡೆಯಲಾಯಿತು.