ಜಮ್ಮು, ಸೆ.26 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ನೌಶೇರಾ ಸೆಕ್ಟರ್ನ ಗಡಿಯುದ್ದಕ್ಕೂ ಪಾಕ್ ಪಡೆಗಳು ಶೆಲ್ ಮತ್ತು ಗುಂಡಿನ ದಾಳಿ ನಡೆಸುತ್ತಿವೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಗುಂಡಿನ ದಾಳಿಯ ವೇಳೆ ಇಲ್ಲಿಯವರೆಗೆ ಭಾರತೀಯ ಸೇನೆ ಕಡೆ ಯಾವುದೇ ಪ್ರಾಣಹಾನಿ ಅಥವಾ ಗಾಯ ಆಗಿಲ್ಲ ಎಂದು ಅವರು ಹೇಳಿದ್ದಾರೆ.