ನವದೆಹಲಿ, ಸೆ. 26 (DaijiworldNews/MB) : ಬಿಜೆಪಿಯ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ.
ಹಾಗೆಯೇ ಸಚಿವ ಸಿ.ಟಿ.ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿಯಾಗಿ ನೇಮಿಸಲಾಗಿದೆ.
ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಹೊಸ ಸಮಿತಿಯ ವಿವರವನ್ನು ಶನಿವಾರ ಪ್ರಕಟಿಸಿದ್ದಾರೆ.
ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಟ್ಟಿಯಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು ಹಲವರ ಹೆಸರನ್ನು ಕೈ ಬಿಡಲಾಗಿದೆ. ಹಾಗೆಯೇ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಉತ್ತಮ ವಾಕ್ಚಾತುರ್ಯ ರೂಢಿಸಿಕೊಂಡ ಅನೇಕ ಯುವಕರಿಗೆ ಅವಕಾಶ ನೀಡಲಾಗಿದೆ.