ನವದೆಹಲಿ, ಸೆ.26 (DaijiworldNews/HR): ಸಂಸತ್ತಿನಲ್ಲಿ ಅಂಗೀಕಾರಗೊಂಡ ಕೃಷಿ ಮಸೂದೆಗಳನ್ನು ವಿರೋಧಿಸಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ 'ರೈತರಿಗಾಗಿ ಮಾತನಾಡಿ' ಅಭಿಯಾನವನ್ನು ಪ್ರಾರಂಭಿಸಿದೆ.
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರನ್ನು ಶೋಷಿಸುತ್ತಿದ್ದು ಅದರ ವಿರುದ್ಧ ಜನ ದನಿ ಎತ್ತಬೇಕು ಎಂಬುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಮುಂಗಾರು ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಮಸೂದೆಗಳನ್ನು ಅಂಗೀಕರಿಸಿದ್ದು, ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿವೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ಮೋದಿ ಸರ್ಕಾರವು ರೈತರ ದೌರ್ಜನ್ಯ ಮತ್ತು ಶೋಷಣೆಗೆ ವಿರುದ್ಧವಾಗಿ ನಾವು ಒಟ್ಟಾಗಿ ಧ್ವನಿ ಎತ್ತೋಣ ಎಂಬುದಾಗಿ ಹೇಳಿದ್ದಾರೆ.
ಇನ್ನು ವಿಡಿಯೊ ಕಳುಹಿಸುವ ಮೂಲಕ ‘ರೈತರಿಗಾಗಿ ಮಾತನಾಡಿ’ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದಿರುವ ರಾಹುಲ್, ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್ ಮಾಡಿದ್ದಾರೆ.