ಮುಂಬೈ, ಸೆ 27(DaijiworldNews/PY): ಮುಂಬೈನ ಪಂಚತಾರ ಹೋಟೆಲ್ನಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆಯ ಮುಖ್ಯ ವಕ್ತಾರ ಸಂಜಯ್ ರಾವುತ್ ಅವರು ಶನಿವಾರ ಭೇಟಿಯಾಗಿದ್ದು, ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.
ಈ ಬೆಳವಣಿಗೆಯು ಮಹಾರಾಷ್ಟ್ರದಲ್ಲಿ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟು ಮಾಡಿದ್ದು, ಆದರೆ, ಈ ಭೇಟಿಯ ಹಿಂದೆ ರಾಜಕಾರಣವಿಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.
ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ, ಬಿಜೆಪಿಯ ಪ್ರವೀಣ್ ದಾರೆಕರ್ ಅವರು, ಸಾಮ್ನ ಜೊತೆಗಿನ ನಿಗದಿತ ಸಂದರ್ಶನವೊಂದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಇಬ್ಬರೂ ನಾಯಕರು ಭೇಟಿಯಾಗಿದ್ದರು ಎಂದು ತಿಳಿಸಿದ್ದಾರೆ.
ಇಬ್ಬರು ನಾಯಕರು ಭೇಟಿ ಮಾಡಿ, ಸಭೆ ನಡೆಸಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಈ ಹಿಂದೆ ಎಸ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸಂದರ್ಶನ ಮಾಡಿದ್ದು, ಬಳಿಕ ಸಾಮ್ನಾ ಅದನ್ನು ಮೂರು ಭಾಗಗಳಾಗಿ ಪ್ರಕಟ ಪಡಿಸಿತ್ತು.