ಬೆಂಗಳೂರು, ಸೆ. 27 (DaijiworldNews/HR): ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿದ್ದು, ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ , ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ರಾಜ್ಯಾದ್ಯಂತ ಬಂದ್ ಗೆ ನಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ. ಕೃಷಿ ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿರುವಂತೆಯೇ ರೈತರ ಆಕ್ರೋಶವೂ ಹೆಚ್ಚಾಗಿದ್ದು, ಕರ್ನಾಟಕ ಬಂದ್ಗೆ ರಾಜ್ಯದ ಜನ ಸಂಪೂರ್ಣ ಸಹಕಾರ ನೀಡಬೇಕು ಎಂದು ಐಕ್ಯ ಹೋರಾಟ ವೇದಿಕೆ ಮುಖಂಡರು ಮನವಿ ಮಾಡಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.
ಇನ್ನು ಬಂದ್ಗೆ ಕಬಿನಿ ರೈತ ಹಿತರಕ್ಷಣ ಸಮಿತಿ, ರಾಜ್ಯ ಕೃಷಿ ಪಂಪ್ ಸೆಟ್ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಕರ್ನಾಟಕ ರಕ್ಷಣ ವೇದಿಕೆ ಸಹಿತ ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ.