ಬೆಂಗಳೂರು, ಸೆ 27(DaijiworldNews/PY): ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಸ್ವತಃ ಅವರೇ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ಟೆಸ್ಟ್ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ದಿನೇಶ್ ಗುಂಡೂರಾವ್ ಅವರು ಇಂದು ಮಧ್ಯಾಹ್ನ ನಡೆಯಲಿದ್ದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗೈರಾಗುವ ಸಾಧ್ಯತೆ ಇದೆ. ಈ ಮಹತ್ವದ ಸಭೆಗೆ ಶಾಸಕರು ಸೇರಿದಂತೆ ಎಂಎಲ್ ಸಿಗಳು, ಮಾಜಿ ಶಾಸಕರನ್ನೂ ಆಹ್ವಾನಿಸಲಾಗಿದೆ.