ಕೊಲ್ಕತ್ತಾ, ಸೆ 28 (DaijiworldNews/HR): ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಅಲ್-ಖೈದಾದ ಸಂಚಿನಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ಬಂಧಿಸಲ್ಪಟ್ಟವರೊಂದಿಗೆ ಆತನು ಜೊತೆಗಿದ್ದುದನ್ನು ನಾವು ಕಂಡುಕೊಂಡಿದ್ದೇವೆ. ನಾವು ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನು ಪಾಕಿಸ್ತಾನ ಪ್ರಾಯೋಜಿತ ಅಲ್-ಖೈದಾದ ಒಡನಾಟಕ್ಕಾಗಿ ಈ ಹಿಂದೆ ಪಶ್ಚಿಮ ಬಂಗಾಳದಿಂದ ಆರು ಮತ್ತು ಕೇರಳದ ಮೂವರನ್ನು ಸೇರಿ ಒಟ್ಟು ಒಂಬತ್ತು ಜನರನ್ನು ಬಂಧಿಸಲಾಗಿತ್ತು.