ಬೆಂಗಳೂರು, ಸೆ 28 (DaijiworldNews/HR): ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಪಾಟಿಸಿವ್ ಬಂದಿದೆ. ಆದರೆ ಯಾವುದೇ ಲಕ್ಷಣಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ.
10 ದಿನ ಸ್ವಯಂ ಕ್ವಾರಂಟೈನ್ ನಲ್ಲಿದ್ದೇನೆ. ನಿಮ್ಮ ಹಾರೈಕೆಯಿಂದ ಬೇಗ ಗುಣಮುಖನಾಗುತ್ತೇನೆ. ನನ್ನೊಂದಿಗೆ ಕೆಲವು ದಿನಗಳಿಂದ ಸಂಪರ್ಕ ಹೊಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.