ಶ್ರೀನಗರ, ಸೆ 28 (DaijiworldNews/HR): ಪುಲ್ವಾಮಾದಲ್ಲಿ ಇಂದು ಬೆಳಿಗ್ಗೆ ತೀವ್ರ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದ್ದು, ಈವರೆಗೂ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಸಾಂಬೂರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು. ಕಾರ್ಯಾಚರಣೆ ವೇಳೆ ಓರ್ವ ಯೋಧ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.
ಭದ್ರತಾಪಡೆಗಳು ಭಾನುವಾರ ರಾತ್ರಿಯಿಂದ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಇನ್ನು ಜಮ್ಮು- ಕಾಶ್ಮೀರ ಪೊಲೀಸರು, 50 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಲಾಗಿದೆ.