ನವದೆಹಲಿ, ಸೆ 28 (DaijiworldNews/HR): ದೇಶದಾದ್ಯಂತ ರಾಜಕೀಯ ಪಕ್ಷಗಳು ಮತ್ತು ರೈತ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿರುವ ಕೃಷಿ ಮಸೂದೆಗಳನ್ನು ಮರಣ ಶಾಸನ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೃಷಿ ಮಸೂದೆಗಳು ರೈತರ ಪಾಲಿನ ಮರಣ ಶಾಸನಗಳಾಗಿವೆ. ಸಂಸತ್ ಹಾಗೂ ಹೊರಗಡೆ ರೈತರ ಧ್ವನಿಯನ್ನು ಕಿತ್ತುಕೊಳ್ಳಲಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಸತ್ತಿರುವುದಕ್ಕೆ ಇದೇ ಸಾಕ್ಷಿಯಂತಿದೆ ಎಂಬುದಾಗಿ ಟ್ವೀಟ್ ಮಾಡಿದ್ದಾರೆ.
ಇತ್ತೀಚಿಗೆ ಅಧಿವೇಶನದಲ್ಲಿ ಸಂಸತ್ತಿನಿಂದ ಅಂಗೀಕಾರಗೊಂಡಿರುವ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕುವ ಮೂಲಕ ಎಲ್ಲಾ ಮೂರು ಮಸೂದೆಗಲು ಕಾನೂನುಗಳಾಗಿ ಜಾರಿಗೆ ಬಂದಿವೆ.