ಬೆಂಗಳೂರು, ಸೆ. 28 (DaijiworldNews/SM): ಮತ್ತೆ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ತೆರವಾದ ಸ್ಥಾನಕ್ಕೆ ನೂತನ ಡಿಸಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಇತ್ತೀಚಿಗಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿ ಶರತ್ ಅವರನ್ನು ದಿಢೀರ್ ವರ್ಗಾಯಿಸಲಾಗಿದೆ. ಆಗಸ್ಟ್ 29 ರಂದು ಕಲಬುರಗಿಯಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಇದೀಗ ಒಂದು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಅವರನ್ನು ವರ್ಗಾಯಿಸಲಾಗಿದೆ. ಈ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿದೆ.
ಇನ್ನು ಐಎ ಎಸ್ ಅಧಿಕಾರಿ ಸಿಂಧೂರಿಯವರು ಈ ಹಿಂದೆ ರಾಜ್ಯ ಸರ್ಕಾರ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿ ಸೇವೆಯಲ್ಲಿದ್ದರು.