ಶ್ರೀನಗರ, ಸೆ. 29(DaijiworldNews/HR): ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ ಭಾರತೀಯ ಯೋಧನೋರ್ವ ಗಾಯಗೊಂಡ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಪಾಕ್ ಸೈನಿಕರು ಜಮ್ಮು-ಕಾಶ್ಮೀರದ ಮಾಚಿಲ್ ಸೆಕ್ಟರ್ ಬಳಿ ಸಣ್ಣ ಪಿರಂಗಿ ಬಳಸಿ ದಾಳಿ ನಡೆಸಿದ್ದು, ಯೋಧನೋರ್ವ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಪರಿಸ್ಥಿತಿ ಸ್ಥಿರವಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಇನ್ನು ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಸಹ ಗುಂಡಿನ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.