ಬೆಂಗಳೂರು, ಸೆ. 29(DaijiworldNews/HR): ಕೊರೊನಾ ಸೋಂಕಿನಿಂದ ದೇಶದಲ್ಲಿ 50 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಭಾರತದಲ್ಲಿ ಗುಣಮುಖರಾಗುವ ಪ್ರಮಾಣ ಶೇ 100ಕ್ಕೆ ಸಮೀಪ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ 61 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 50 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಅಂದರೆ, ಒಟ್ಟು ಪ್ರಕರಣಗಳ ಪೈಕಿ ಶೇ 82ರಷ್ಟು ಪ್ರಕರಣಗಳಲ್ಲಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಇನ್ನು ಆಗಸ್ಟ್ 27ರಂದು ದೇಶದಲ್ಲಿ 25.23 ಲಕ್ಷ ಜನರು ಗುಣಮುಖರಾಗಿದ್ದು, ಆ ಪ್ರಮಾಣ ಸೆಪ್ಟೆಂಬರ್ 17ಕ್ಕೆ 40 ಲಕ್ಷ ಹಾಗೂ ಸೆಪ್ಟೆಂಬರ್ 28ಕ್ಕೆ 50 ಲಕ್ಷ ದಾಟಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಟಿಸಿದೆ.